01.06.2015 ಸೋಮವಾರ ಪ್ರವೇಶೋತ್ಸವದೊಂದಿಗೆ 2015-16 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿತು. ಬೆಳಗ್ಗೆ 10 ಗಂಟೆಗೆ ಸರಿಯಾಗಿ ಅಸೆಂಬ್ಲಿ ಸೇರಲಾಯಿತು. ಪ್ರತಿಜ್ಞೆಯನ್ನು ಬೋಧಿಸಲಾಯಿತು. ನಂತರ ಹೊಸತಾಗಿ ಶಾಲೆಗೆ ಸೇರಿದ ಮಕ್ಕಳನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ಬ್ಯಾಂಡ್ ಸೆಟ್ ವಿಶೇಷ ಮೆರುಗು ನೀಡಿತು.
ಬಳಿಕ ಅನಂತವಿಧ್ಯಾ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ಜರಗಿತು. ವಾರ್ಡಿನ ಸದಸ್ಯ ಆನಂದ ಮಾಸ್ತರ್ ಬಲೂನು ಸಿಡಿಸುವ ಮೂಲಕ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ನಂತರ ಪ್ರವೇಶೋತ್ಸವ ಗೀತೆಯನ್ನು ಹಾಡಲಾಯಿತು. ಒಂದನೇ ತರಗತಿಯ ಮಕ್ಕಳಿಗೆ ಸಮವಸ್ತ್ರ ಹಾಗೂ 'ಕಲಿಕಾ ಕಿಟ್ ' ನ್ನು ಸಾಂಕೇತಿಕವಾಗಿ ಈ ಸಂದರ್ಭದಲ್ಲಿ ವಿತರಿಸಲಾಯಿತು. ಶಾಲಾ ಪ್ರಬಂಧಕ ದಿನೇಶ್ ಶೆಣೈ ಅಧ್ಯಕ್ಷತೆ ವಹಿಸಿದರು. ಶ್ರೀಮತಿ ಲಿಲ್ಲಿ ಟೀಚರ್ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯಿನಿ ಸುದತಿ ಬಿ. ಸಾಮಾನ್ಯ ಸೂಚನೆಗಳನ್ನು ನೀಡಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಮನೋರಮ ಕಿಣಿ ಉಪಸ್ಥಿತರಿದ್ದರು. ಶ್ರೀಕೃಷ್ಣ ಡಿ.ಕೆ. ಸ್ವಾಗತಿಸಿ ದಾಸಪ್ಪ ರೈ ವಂದಿಸಿದರು. ವಿರೇಶ್ವರ ಭಟ್ ನಿರೂಪಿಸಿದರು.
ಸಭಾಕಾರ್ಯಕ್ರಮದ ಬಳಿಕ ಮಕ್ಕಳಿಗೆ ಕೆಲವು ಹಾಡುಗಳು ಹಾಗೂ ವೈವಿಧ್ಯಮಯ ಚಟುವಟಿಕೆಗಳು ಜರಗಿದವು. ಸಿಹಿತಿಂಡಿ ವಿತರಿಸಲಾಯಿತು. ಹೆತ್ತವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
No comments:
Post a Comment